Live Sunday, October 25, 2026
Font Size:
ಸುದ್ದಿ 1 min read 60 Views
Sep 29, 2026

ಅಂಗಾರಕ ಸಂಕಷ್ಟ ಚತುರ್ಥಿ: ಗಣಪತಿಗೆ ವಿಶೇಷ ಪೂಜೆ

ಅಂಗಾರಕ ಸಂಕಷ್ಟ ಚತುರ್ಥಿ: ಗಣಪತಿಗೆ ವಿಶೇಷ ಪೂಜೆ
Share: WhatsApp Facebook
ಸುದ್ದಿ ಆಲಿಸಿ (Audio News Reader)
Listen to full article narration

ಮಧುಗಿರಿ: ಪಟ್ಟಣದ ಕೆಎಸ್ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗದಲ್ಲಿರುವ ಹೊಯ್ಸಳ ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಅಂಗಾರಕ ಸಂಕಷ್ಟ ಚತುರ್ಥಿ ಪ್ರಯುಕ್ತ ಶ್ರೀ ಗಣಪತಿ ದೇವರಿಗೆ ವಿಶೇಷ ಪೂಜೆ, ಹೋಮ-ಹವನ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಸದಸ್ಯರು ಹಾಗೂ ಟ್ಯಾಕ್ಸಿ ಚಾಲಕರು ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಹೋಮ-ಹವನದಲ್ಲಿ ಪಾಲ್ಗೊಂಡರು. ಬಳಿಕ ಮಹಾಮಂಗಳಾರತಿ ನೆರವೇರಿಸಿ, ಭಕ್ತರು ಹಾಗೂ ಸಾರ್ವಜನಿಕರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಎಂ.ಆರ್. ಪ್ರಸಾದ್, ನಾಗರಾಜು ಪೂಲು, ಸಂತೋಷ್, ಮನು ನವೀನ್, ಮಾರುತಿ, ಗುರುಪ್ರಸಾದ್, ರಾಘವೇಂದ್ರ ಸೇರಿದಂತೆ ಸಂಘದ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.