ಮಧುಗಿರಿ: ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಹೊಯ್ಸಳ ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಅಂಗಾರಕ ಸಂಕಷ್ಟ ಚತುರ್ಥಿ ಪ್ರಯುಕ್ತ ಶ್ರೀ ಗಣಪತಿ ದೇವರಿಗೆ ವಿಶೇಷ ಪೂಜೆ, ಹೋಮ-ಹವನ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಸದಸ್ಯರು ಹಾಗೂ ಟ್ಯಾಕ್ಸಿ ಚಾಲಕರು ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಹೋಮ-ಹವನದಲ್ಲಿ ಪಾಲ್ಗೊಂಡರು. ಬಳಿಕ ಮಹಾಮಂಗಳಾರತಿ ನೆರವೇರಿಸಿ, ಭಕ್ತರು ಹಾಗೂ ಸಾರ್ವಜನಿಕರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಎಂ.ಆರ್. ಪ್ರಸಾದ್, ನಾಗರಾಜು ಪೂಲು, ಸಂತೋಷ್, ಮನು ನವೀನ್, ಮಾರುತಿ, ಗುರುಪ್ರಸಾದ್, ರಾಘವೇಂದ್ರ ಸೇರಿದಂತೆ ಸಂಘದ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.