ನೇಣು ಬಿಗಿದು ವ್ಯಕ್ತಿ ಅನುಮಾನಾಸ್ಪದ ಸಾವು

ನೇಣು ಬಿಗಿದು ವ್ಯಕ್ತಿ ಅನುಮಾನಾಸ್ಪದ ಸಾವು

ಮಧುಗಿರಿ - ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ಜರುಗಿದೆ.

ಮಧುಗಿರಿ ಪಟ್ಟಣದ ಗೌರಿಬಿದನೂರು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿದ್ದ ನಾಗರಾಜು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದು, ತಾನು ಕಾರ್ಯನಿರ್ವಹಿಸುತ್ತಿದ್ದ ಪೆಟ್ರೋಲ್ ಬಂಕ್ ಹಿಂದೆ ಇರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಸದ್ಯ ಮಧುಗಿರಿ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ.