Live Sunday, October 25, 2026
Font Size:
ಸುದ್ದಿ 1 min read 14 Views
Sep 04, 2026

ಬೇಡರ ಕಣ್ಣಪ್ಪ ದೇವಾಲಯ ಲೋಕಾರ್ಪಣೆ: ಸೆ.19ರಿಂದ ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮ

ಬೇಡರ ಕಣ್ಣಪ್ಪ ದೇವಾಲಯ ಲೋಕಾರ್ಪಣೆ: ಸೆ.19ರಿಂದ ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮ
Share: WhatsApp Facebook
ಸುದ್ದಿ ಆಲಿಸಿ (Audio News Reader)
Listen to full article narration

ಮಧುಗಿರಿ: ಪಟ್ಟಣದ ಪುರ ಪ್ರವೇಶದ ಸಾಲುಮರದ ತಿಮ್ಮಕ್ಕ ಉದ್ಯಾನವನದ ಸಮೀಪ ಬೆಟ್ಟದ ಮೇಲೆ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಬೇಡರ ಕಣ್ಣಪ್ಪ ದೇವಾಲಯದ ಲೋಕಾರ್ಪಣೆ ಹಾಗೂ ಶ್ರೀ ಶಿವಲಿಂಗ, ನಂದಿ ಮತ್ತು ಭಕ್ತ ಕಣ್ಣಪ್ಪನ ನೂತನ ಶಿಲಾ ವಿಗ್ರಹಗಳ ಸ್ಥಿರ ಪ್ರತಿಷ್ಠಾಪನಾ ಮಹೋತ್ಸವ ಸೆಪ್ಟೆಂಬರ್ 19ರಿಂದ 21ರವರೆಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಈ ಕುರಿತು ಶ್ರೀ ಬೇಡರ ಕಣ್ಣಪ್ಪ ದೇವಾಲಯ ಜೀರ್ಣೋದ್ಧಾರ ಸೇವಾ ಟ್ರಸ್ಟ್ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಮೂರು ದಿನಗಳ ಕಾಲ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ವಿಶೇಷ ಪೂಜೆ, ಹೋಮ-ಹವನ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ಶಾಸಕ ಕೆ.ಎನ್. ರಾಜಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಾಂತಲಾ ರಾಜಣ್ಣ, ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ಸೇರಿದಂತೆ ಗಣ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಟ್ರಸ್ಟ್ ತಿಳಿಸಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಶ್ರೀ ಬೇಡರ ಕಣ್ಣಪ್ಪ ದೇವಾಲಯ ಜೀರ್ಣೋದ್ಧಾರ ಸೇವಾ ಟ್ರಸ್ಟ್ ಮನವಿ ಮಾಡಿದೆ.