ರಾಸಲೀಲೆ ಪ್ರಕರಣ - ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅಮಾನತ್ತು.
ಮಧುಗಿರಿ - ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಪಾವಗಡ ಮೂಲದ ಮಹಿಳೆಯನ್ನು ಠಾಣೆಯ ಶೌಚಾಲಯಕ್ಕೆ ಕರೆದುಕೊಂಡು ಹೋಗಿ ರಾಸಲೀಲೆ ಆಡಿದ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾದ ಬೆನ್ನಲ್ಲೆ. ಪೊಲೀಸ್ ಮಹಾನಿರ್ದೇಶಕರು ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.
ಗೃಹ ಸಚಿವರ ತವರು ಜಿಲ್ಲೆಯಲ್ಲಿ ಇಂತಹ ಘಟನೆ ನಡೆದಿದ್ದು, ಡಿವೈಎಸ್ಪಿ ರಾಸಲೀಲೆಯಿಂದ ಇಡೀ ಪೊಲೀಸ್ ಇಲಾಖೆ ತಲೆತಗ್ಗಿಸುವಂತಾಗಿತ್ತು ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿತ್ತು. ಈ ಹಿನ್ನೆಲೆಯಲ್ಲಿ ರಾಮಚಂದ್ರಪ್ಪ ಅವರನ್ನು ಕೆಲಸದಿಂದ ಅಮಾನತುಗೊಳಿಸಿ ಪೊಲೀಸ್ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದಾರೆ.