ಶ್ರೀ ಶಂಕರ ಸೇವಾ ಸಮಿತಿ ವತಿಯಿಂದ ಪ್ರಥಮ ವರ್ಷದ ಗಣೇಶ ಪ್ರತಿಷ್ಠಾಪನಾ ಕಾರ್ಯಕ್ರಮ

ಶ್ರೀ ಶಂಕರ ಸೇವಾ ಸಮಿತಿ ವತಿಯಿಂದ ಪ್ರಥಮ ವರ್ಷದ ಗಣೇಶ ಪ್ರತಿಷ್ಠಾಪನಾ ಕಾರ್ಯಕ್ರಮ

ಮಧುಗಿರಿ - ಶ್ರೀ ಶಂಕರ ಸೇವಾ ಸಮಿತಿ ವತಿಯಿಂದ ಮೊದಲನೇ ವರ್ಷದ ಗಣೇಶ್ೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಬಿ.ಆರ್.ಸತ್ಯನಾರಾಯಣ್ ತಿಳಿಸಿದ್ದಾರೆ.

ಪಟ್ಟಣದ ಶ್ರೀ ರಾಘವೇಂದ್ರ ಬಡಾವಣೆಯಲ್ಲಿರುವ ಶ್ರೀ ಶಂಕರ ಸಮುದಾಯ ಭವನದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಗಣೇಶ ಪ್ರತಿಷ್ಠಾಪನೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು. ಆಗಸ್ಟ್ 26 ರ ಮಂಗಳವಾರ ಬೆಳಿಗ್ಗೆ 6 ಗಂಟೆ ಯಿಂದ ಸ್ವರ್ಣ ಗೌರಿ ಪ್ರತಿಷ್ಠಾಪನೆ ಮತ್ತು ಆಗಸ್ಟ್ 27 ರ ಬುಧವಾರ ಬೆಳಗ್ಗೆ 9 ಗಂಟೆಗೆ ಗಣಪತಿ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಲಿದೆ. ಆಗುಸ್ಟ್ 28 ರ ಗುರುವಾರ ಸಂಜೆ 6 ಗಂಟೆಗೆ ಶ್ರೀ ಶಾರದಾ ಮಹಿಳಾ ಮಂಡಳಿಯವರಿಂದ ದೇವರನಾಮಗಳು, ಆಗಸ್ಟ್ 29 ರ ಶುಕ್ರವಾರ ಸಂಜೆ 6 ಗಂಟೆಯಿಂದ ಮಧುಗಿರಿಯ ಶಿವದರ್ಶಿನಿ ನೃತ್ಯ ಕಲಾ ಕೇಂದ್ರದ ವತಿಯಿಂದ ಭರತನಾಟ್ಯ, ಆಗಸ್ಟ್ 30ರ ಶನಿವಾರ ಸಂಜೆ 6 ಗಂಟೆಯಿಂದ ಚಂದನ ವಾಹಿನಿ ಖ್ಯಾತಿಯ ಚಲನಚಿತ್ರ ಹಿನ್ನೆಲೆ ಗಾಯಕರಾದ ಶ್ರೀ ಕಡಬಗೆರೆ ಮುನಿರಾಜು ಮತ್ತು ತಂಡವರಿಂದ ಗೀತ ಗಾಯನ ಕಾರ್ಯಕ್ರಮ ಹಾಗೂ ಆಗಸ್ಟ್ 31ರ ಬೆಳಿಗ್ಗೆ 10 ಗಂಟೆಯಿಂದ ವಿವಿಧ ಕಲಾತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಗಣಪತಿ ವಿಸರ್ಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿರುವ ಅವರು, ಕಾರ್ಯಕ್ರಮಕ್ಕೆ ಹೆಚ್ಚಿನ ಭಕ್ತಾದಿಗಳು ಭಾಗವಹಿಸಿ ಸಹಕಾರ ನೀಡಬೇಕೆಂದು ಕೋರಿದ್ದಾರೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ - 944862403 ಯನ್ನು ಸಂಪರ್ಕಿಸಬಹುದಾಗಿದೆ.