ಚಂದ್ರಗಿರಿ ಗ್ರಾ.ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ  ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆ.

ಚಂದ್ರಗಿರಿ ಗ್ರಾ.ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆ.

ಮಧುಗಿರಿ : ತಾಲೂಕಿನ ಚಂದ್ರಗಿರಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿ ಕಾಂಗ್ರೇಸ್ ಬೆಂಬಲಿತ ರೇಣುಕಮ್ಮ ಹಾಗೂ ಉಪಾಧ್ಯಕ್ಷೆಯಾಗಿ ಭಾಗ್ಯಮ್ಮ ಅವರು ಅವಿರೋಧವಾಗಿ ಆಯ್ಕೆಯಾದರು. 

ಗುರುವಾರ ಚಂದ್ರಗಿರಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ರೇಣುಕಮ್ಮ ಹಾಗೂ ಭಾಗ್ಯಮ್ಮ ನಾಮಪತ್ರ ಸಲ್ಲಿಸಿದ್ದು, ಇವರ ವಿರುದ್ದ ಯಾರೂ ನಾಮಪತ್ರ ಸಲ್ಲಿಸದ ಕಾರಣ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಿದ್ದ ತಹಶೀಲ್ದಾರ್ ಶಿರಿನ್ ತಾಜ್ ಅವರು ಘೋಷಣೆ ಮಾಡಿದರು. 

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತಿ ಮಾಜಿ ಹಾಗೂ ವಿಎಸ್‌ಎಸ್‌ಎನ್ ಹಾಲಿ ಅಧ್ಯಕ್ಷ ಲಕ್ಷ್ಮೀನಾರಾಯಣ್ ಮಾತನಾಡಿ, ಸಹಕಾರಿ ಸಚಿವರಾದ ಕೆ.ಎನ್.ರಾಜಣ್ಣ ಹಾಗೂ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರ ಸಹಕಾರದಿಂದ ಅವರ ಬೆಂಬಲಿತ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಅವಿರೋದವಾಗಿ ಆಯ್ಕೆಯಾಗಿದ್ದು, ಇದಕ್ಕೆ ಸಹಮತ ವ್ಯಕ್ತ ಪಡಿಸಿದ ಎಲ್ಲಾ ಸದಸ್ಯರಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದು ತಿಳಿಸಿದರು.

ಈ ವೇಳೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೋಪಾಲಕೃಷ್ಣ, ಸದಸ್ಯರಾದ ಅಂಗಡಿ ತಿಮ್ಮಣ್ಣ, ರಂಗನಾಥಪ್ಪ, ಚಿಕ್ಕತಾಯಮ್ಮ, ವನಜಾಕ್ಷಿ, ರಂಗಸ್ವಾಮಿ, ಮುಖಂಡ ಕಿಶೋರ್ ಹಾಗೂ ಮುಂತಾದವರು ಇದ್ದರು.