ಜೆಡಿಎಸ್ ಮುಖಂಡ ಜಡೆಗೊಂಡನಹಳ್ಳಿ ಚೌಡಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಮಧುಗಿರಿ - ಪಿ ಎಲ್ ಡಿ ಬ್ಯಾಂಕ್ ಮಾಜಿ ನಿರ್ದೇಶಕ ಹಾಗೂ ಜೆಡಿಎಸ್ ಮುಖಂಡ ಜಡೆಗೊಂಡನಹಳ್ಳಿ ಚೌಡಪ್ಪ ಜೆಡಿಎಸ್ ಪಕ್ಷ ತೊರೆದು ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಸಿದ್ದಾಪುರ ಗ್ರಾಮ ಪಂಚಾಯತಿ ಸದಸ್ಯರಾದ ರಾಜಗೋಪಾಲ್ ಎಸ್ ಜಿ, ಲೋಕೇಶ್ ಹಾಗೂ ಕಾಂಗ್ರೆಸ್ ಮುಖಂಡ ಮಂಜುನಾಥ್ ಇದ್ದರು.