Live Tuesday, October 27, 2026
Font Size:
ಸುದ್ದಿ 1 min read 14 Views
Sep 20, 2026

ಮಧುಗಿರಿಯಲ್ಲಿ ಅಸ್ತವ್ಯಸ್ತ ಆಟೋ ನಿಲುಗಡೆ: ಸಾರ್ವಜನಿಕರಿಗೆ ತೊಂದರೆ

ಮಧುಗಿರಿಯಲ್ಲಿ ಅಸ್ತವ್ಯಸ್ತ ಆಟೋ ನಿಲುಗಡೆ: ಸಾರ್ವಜನಿಕರಿಗೆ ತೊಂದರೆ
Share: WhatsApp Facebook
ಸುದ್ದಿ ಆಲಿಸಿ (Audio News Reader)
Listen to full article narration

ಮಧುಗಿರಿ: ಪಟ್ಟಣದ ರಾಘವೇಂದ್ರ ಸ್ವಾಮಿ ದೇವಸ್ಥಾನದ ಎಡಭಾಗದ ಕಿರಿದಾದ ರಸ್ತೆಯಲ್ಲಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.

ಪಟ್ಟಣದಲ್ಲಿ ವಾಹನ ಸಂಚಾರ ಹೆಚ್ಚಾಗುತ್ತಿರುವುದರಿಂದ ಟ್ರಾಫಿಕ್ ದಟ್ಟಣೆಯೂ ಹೆಚ್ಚಾಗಿದೆ. ಇದರ ನಡುವೆ ಆಟೋಗಳು ಎಲ್ಲೆಂದರಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದರಿಂದ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಈ ವಿಚಾರವಾಗಿ ಹಲವು ಸಂದರ್ಭಗಳಲ್ಲಿ ಆಟೋ ಚಾಲಕರು ಹಾಗೂ ಇತರೆ ವಾಹನ ಚಾಲಕರ ನಡುವೆ ಘರ್ಷಣೆಗಳು ನಡೆದಿರುವ ಉದಾಹರಣೆಗಳೂ ಇವೆ.

ಅಸ್ತವ್ಯಸ್ತ ನಿಲುಗಡೆಯಿಂದ ಟ್ರಾಫಿಕ್ ಜಾಮ್ ಹಾಗೂ ನಿರಂತರ ಹಾರ್ನ್ ಶಬ್ದದಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದೆ. ಆದ್ದರಿಂದ ಆಟೋಗಳಿಗೆ ಸರತಿ ಸಾಲಿನಲ್ಲಿ ನಿಲುಗಡೆ ವ್ಯವಸ್ಥೆ ಕಲ್ಪಿಸಿ, ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ವಾಹನ ನಿಲ್ಲಿಸುವುದಕ್ಕೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕು. ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.