ವಿ ಪಂ ಸದಸ್ಯ ರಾಜೇಂದ್ರ ರಾಜಣ್ಣ ಅವರಿಂದ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ

ವಿ ಪಂ ಸದಸ್ಯ ರಾಜೇಂದ್ರ ರಾಜಣ್ಣ ಅವರಿಂದ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ

ಮಧುಗಿರಿ - ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಶ್ರಾವಂಡನಹಳ್ಳಿಯ  ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಅಂದಾಜು 8.24 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಕಟ್ಟಡದ ಕಾಮಗಾರಿಗೆ ಶಂಕು ಸ್ಥಾಪನೆಯನ್ನು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ನೆರವೇರಿಸಿದರು 

ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷ ಲಾಲಾಪೇಟೆ ಮಂಜುನಾಥ್, ಕೆ.ಎಮ್.ಎಫ್ ನಿರ್ದೇಶಕ ಕಾಂತರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿನಾರಾಯಣ ರೆಡ್ಡಿ, ಮುಖಂಡರಾದ ಎಮ್.ಎಸ್ ಮಲ್ಲಿಕಾರ್ಜುನಯ್ಯ, ಪಂಚಾಕ್ಷರಯ್ಯ,  ಗ್ರಾಮ ಪಂಚಾಯಿತಿ ಸದಸ್ಯರುಗಳು ಮುಖಂಡರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.