Live Tuesday, October 27, 2026
Font Size:
ಸುದ್ದಿ 1 min read 68 Views
Sep 29, 2026

ವಿಜಯದೀಪ ವರದಿಗೆ ಫಲಶ್ರುತಿ: ರಾಘವೇಂದ್ರ ಸ್ವಾಮಿ ದೇವಸ್ಥಾನ ಬಳಿ ಸುಗಮ ಸಂಚಾರಕ್ಕೆ ಅನುವು

ವಿಜಯದೀಪ ವರದಿಗೆ ಫಲಶ್ರುತಿ: ರಾಘವೇಂದ್ರ ಸ್ವಾಮಿ ದೇವಸ್ಥಾನ ಬಳಿ ಸುಗಮ ಸಂಚಾರಕ್ಕೆ ಅನುವು
Share: WhatsApp Facebook
ಸುದ್ದಿ ಆಲಿಸಿ (Audio News Reader)
Listen to full article narration

ಮಧುಗಿರಿ: ಪಟ್ಟಣದ ರಾಘವೇಂದ್ರ ಸ್ವಾಮಿ ದೇವಸ್ಥಾನದ ಸಮೀಪ ಆಟೋಗಳ ಅಸ್ತವ್ಯಸ್ತ ನಿಲುಗಡೆ ಹಾಗೂ ಫುಟ್‌ಪಾತ್‌ ಒತ್ತುವರಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿದ್ದ ತೊಂದರೆ ಕುರಿತು ವಿಜಯದೀಪ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು.

ವರದಿಗೆ ಸ್ಪಂದಿಸಿದ ಮಧುಗಿರಿ ಪುರಸಭೆ ಹಾಗೂ ಪೊಲೀಸ್ ಇಲಾಖೆ ಸ್ಥಳಕ್ಕೆ ತೆರಳಿ ಫುಟ್‌ಪಾತ್‌ನಲ್ಲಿದ್ದ ಅಸ್ತವ್ಯಸ್ತ ವಸ್ತುಗಳನ್ನು ತೆರವುಗೊಳಿಸಿ, ಸಾರ್ವಜನಿಕರ ಸುಗಮ ಓಡಾಟಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಕಾರ್ಯಾಚರಣೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸುರೇಶ್, ಸಬ್‌ ಇನ್ಸ್‌ಪೆಕ್ಟರ್‌ ಚಂದ್ರಶೇಖರ್, ಆರೋಗ್ಯ ನಿರೀಕ್ಷಕ ಬಾಲಾಜಿ, ಪೊಲೀಸ್ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.

ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ತ್ವರಿತ ಕ್ರಮ ಕೈಗೊಂಡ ಅಧಿಕಾರಿಗಳ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.